alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ, ಜೇಟ್ಲಿ ಪೋಸ್ಟರ್ ಗೆ ಮಸಿ, ಮೊಟ್ಟೆ

protest 28

ಮೀರತ್: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಘಟನೆ ಮೀರತ್ ನಲ್ಲಿ ನಡೆದಿದೆ. ಮೀರತ್ ವ್ಯಾಪಾರಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಈ ಘಟನೆ ನಡೆದಿದೆ.

ಇದೇ ಮಾರ್ಚ್ 23 ರಂದು ಮೀರತ್ ವರ್ತಕರು, ಚಿನ್ನಾಭರಣ ವ್ಯಾಪಾರಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನಾ ಮೆರವಣಿಗೆ ನಡೆಯುವ ಸಂದರ್ಭದಲ್ಲಿ ನರೇಂದ್ರ ಮೋದಿ ಹಾಗೂ ಅರುಣ್ ಜೇಟ್ಲಿ ಅವರ ಭಾವಚಿತ್ರಕ್ಕೆ ಮಸಿ ಬಳಿದು, ಮೊಟ್ಟೆ ಎಸೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 150 ಮಂದಿಯ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ರಾಜ್ ಕುಮಾರ್ ಭಾರದ್ವಾಜ್, ಸರ್ವೇಶ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆದರೆ, ಮೋದಿ ಹಾಗೂ ಜೇಟ್ಲಿ ಅವರ ಭಾವಚಿತ್ರಕ್ಕೆ ಮಸಿ, ಮೊಟ್ಟೆ ಎಸೆದಿಲ್ಲ ಎಂದು ವರ್ತಕರು, ಚಿನ್ನ- ಬೆಳ್ಳಿ ವ್ಯಾಪಾರಸ್ಥರು ಸ್ಪಷ್ಟನೆ ನೀಡಿದ್ದಾರೆ. ಯಾರೋ ಹೊರಗಿನವರು ಮಾಡಿರಬಹುದಾಗಿದ್ದು, ಇದಕ್ಕೂ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...