alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

tuni

ಹೈದರಾಬಾದ್: ಕಾಪು ಸಮುದಾಯವನ್ನು ಓಬಿಸಿಗೆ ಸೇರಿಸಬೇಕೆಂದು ಆಗ್ರಹಿಸಿ ಆಂಧ್ರಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಉದ್ರಿಕ್ತರ ಗುಂಪು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ.

ಅಲ್ಲದೇ, ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೆಲವರು ಆಕ್ರೋಶಗೊಂಡು ಆಂಧ್ರ ಪ್ರದೇಶದ ಟುನಿ ಎಂಬಲ್ಲಿ ರೈಲಿಗೆ ಬೆಂಕಿ ಹಚ್ಚಿದ್ದಾರೆ. ರತ್ನಾಂಚಲ ರೈಲು ನಿಲ್ದಾಣಕ್ಕೆ ನುಗ್ಗಿದ ಉದ್ರಿಕ್ತರ ಗುಂಪು ರೈಲಿಗೆ ಬೆಂಕಿ ಹಚ್ಚಿದ್ದು, ಅವರನ್ನು ತಡೆಯಲು ಹೋದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪೊಲೀಸರು, ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಇದನ್ನು ವರದಿ ಮಾಡಲು ಹೋಗಿದ್ದ ಮಾಧ್ಯಮದವರ ವಾಹನಗಳ ಮೇಲೂ ಉದ್ರಿಕ್ತರು ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿರುವ ಕಾಪು ಜನಾಂಗಕ್ಕೆ ಮೀಸಲಾತಿ ನೀಡಬೇಕು. ಹಿಂದುಳಿದ ಓಬಿಸಿ ವರ್ಗಕ್ಕೆ ಸೇರಿಸಬೇಕೆಂದು ಹಮ್ಮಿಕೊಂಡಿದ್ದ ಹೋರಾಟದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಸಂಖ್ಯೆಯ ಜನ ಪಾಲ್ಗೊಂಡಿದ್ದರು. ಈ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಹಲವಾರು ಸರ್ಕಾರಿ, ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...