alex Certify
ಕನ್ನಡ ದುನಿಯಾ       Mobile App
       

Kannada Duniya

ಜರ್ಮನ್ ಬೇಕರಿ ಸ್ಪೋಟ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

german-bakery-blast

2010 ರಲ್ಲಿ ಪುಣೆಯಲ್ಲಿ ನಡೆದ ಜರ್ಮನ್ ಬೇಕರಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿರ್ಜಾ ಹಿಮಾಯತ್ ಬೇಗ್ ಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಈ ಕುರಿತು ಇಂದು ತೀರ್ಪು ನೀಡಿದ ನ್ಯಾಯಮೂರ್ತಿಗಳಾದ ಎನ್.ಹೆಚ್. ಪಾಟೀಲ್ ಹಾಗೂ ಎಸ್.ಬಿ. ಶುಕ್ರೆ ಅವರುಗಳಿದ್ದ ಪೀಠ 2013 ರಲ್ಲಿ ಪುಣೆ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದೆ.

ವಿದೇಶಿಯರನ್ನು ಗುರಿಯಾಗಿಸಿಕೊಂಡು ಪುಣೆಯಲ್ಲಿನ ಜರ್ಮನಿ ಬೇಕರಿಯಲ್ಲಿ ಸ್ಪೋಟ ನಡೆಸಿದ್ದು, 17 ಮಂದಿ ಸಾವಿಗೀಡಾಗಿ 58 ಮಂದಿ ಗಾಯಗೊಂಡಿದ್ದರು. ಈ ಕುರಿತು ತನಿಖೆ ನಡೆಸಿದ್ದ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಮಿರ್ಜಾ ಹಿಮಾಯತ್ ಬೇಗ್ ಸೇರಿದಂತೆ ಹಲವರನ್ನು ಬಂಧಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...