alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯಕರನಿಂದ ಮೋಸ ಹೋದ ಯುವತಿ ಸಾವಿಗೆ ಶರಣು

ಪಂಜಾಬ್‌: ಪ್ರಿಯಕರನಿಂದ ಮೋಸ ಹೋದ ಯುವತಿ, ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಲೈವ್‌ ಸ್ಟ್ರೀಮ್‌ ಮಾಡಿ ಪ್ರಾಣ ಬಿಟ್ಟಿದ್ದಾಳೆ. ಪಂಜಾಬ್‌ನ ಸತ್ನಂಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮನಿಷಾ(18) ಮೃತ ಯುವತಿ ಎಂದು ಗುರುತಿಸಲಾಗಿದೆ.

ಪೇಯಿಂಗ್‌ ಗೆಸ್ಟ್‌ ಮನೆಯಲ್ಲಿದ್ದ ಮನಿಷಾ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಇನ್‌ಸ್ಟಾಗ್ರಾಂನಲ್ಲಿ ಲೈವ್‌ ಸ್ಟ್ರೀಮಿಂಗ್‌ ಮಾಡಿದ್ದಾಳೆ. ಪ್ರಿಯಕರನ ಹೆಸರನ್ನು ಒಂದು ಚೀಟಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಪ್ರಿಯಕರ ಇಂದರ್‌ ಹಾಗೂ ಆಕೆಯ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನಿಷಾ ತಂದೆ ಫ್ರಾನ್ಸ್‌ನಲ್ಲಿದ್ದು, ಘಟನೆ ಬಗ್ಗೆ ತಿಳಿಸಲಾಗಿದೆ. ಮನಿಷಾ ದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ನೌಕರಿ ಹುಡುಕಿಕೊಂಡು ಬಂದಿದ್ದ ಮನಿಷಾ ಪಂಜಾಬ್‌ನಲ್ಲಿದ್ದಳು. ಮೊಬೈಲ್‌ ಕರೆ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ. ತನಿಖೆ ನಡೆಸಲಾಗುತ್ತಿದ್ದು, ಮನಿಷಾ ಪ್ರಿಯಕರ ಇಂದರ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...