alex Certify
ಕನ್ನಡ ದುನಿಯಾ       Mobile App
       

Kannada Duniya

ಪುತ್ತಿಂಗಲ್ ದುರಂತ: ಎಲ್ಲ ಆರೋಪಿಗಳಿಗೂ ಜಾಮೀನು

508041-kerala-temple-1ಏಪ್ರಿಲ್ 10 ರಂದು ಕೇರಳದ ಪುತ್ತಿಂಗಲ್ ದೇವಾಲಯದಲ್ಲಿ ನಡೆದಿದ್ದ ಪಟಾಕಿ ದುರಂತದಲ್ಲಿ 106 ಮಂದಿ ಸಾವನ್ನಪ್ಪಿ 380 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದ ಪ್ರಕರಣದಲ್ಲಿ ಆರೋಪಿಗಳಾಗಿದ್ದ 43 ಮಂದಿ ಆರೋಪಿಗಳಿಗೆ ಕೇರಳ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಘಟನೆ ನಡೆದು 90 ದಿನಗಳ ಮೇಲಾದರೂ ಪೊಲೀಸರು ಇನ್ನೂ ಚಾರ್ಜ್ ಶೀಟ್ ಸಲ್ಲಿಸದಿರುವುದನ್ನು ಪರಿಗಣಿಸಿದ ನ್ಯಾಯಾಲಯ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತಲ್ಲದೇ ಆರೋಪಿಗಳು ತಮ್ಮ ಪಾಸ್ ಪೋರ್ಟ್ ಗಳನ್ನು ಪೊಲೀಸರಿಗೆ ಒಪ್ಪಿಸಬೇಕು ಹಾಗೂ ವಿಚಾರಣೆ ಸಂದರ್ಭದಲ್ಲಿ ರಾಜ್ಯವನ್ನು ತೊರೆಯಬಾರದೆಂಬ ಷರತ್ತು ವಿಧಿಸಿದೆ.

ಪುತ್ತಿಂಗಲ್ ದೇವಾಲಯದ ಧಾರ್ಮಿಕ ಸಮಾರಂಭದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಪಟಾಕಿ ಸಂಗ್ರಹಿಸಿಟ್ಟಿದ್ದ ಕೊಠಡಿಗೆ ಬೆಂಕಿ ಬಿದ್ದು, ಭಾರೀ ಅನಾಹುತ ಸಂಭವಿಸಿತ್ತು. ಹೀಗಾಗಿ ಪೊಲೀಸರು, ದೇವಾಲಯದ ಆಡಳಿತ ಮಂಡಳಿ, ಪಟಾಕಿ ಸರಬರಾಜು ಮಾಡಿದ್ದ ಗುತ್ತಿಗೆದಾರ ಮತ್ತಾತನ ಕೆಲಸಗಾರರ ಮೇಲೆ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು. ಇದೀಗ ಎಲ್ಲ 43 ಮಂದಿ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...