alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ-ಆರ್.ಎಸ್.ಎಸ್. ಹೊಗಳಿದ ರಾಹುಲ್..!

ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಸದಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿರುತ್ತಾರೆ. ಆದ್ರೆ ಈ ಬಾರಿ ರಾಹುಲ್ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರನ್ನು ಹೊಗಳಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ಮಂತ್ರ ಹೇಳಿದ ರಾಹುಲ್, ಬಿಜೆಪಿ-ಆರ್ ಎಸ್ ಎಸ್ ಕಾರ್ಯಕರ್ತರ ಕೆಲಸ ನೋಡಿ ಕಲಿಯಿರಿ ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್, ನಮ್ಮವರು ಆರ್ ಎಸ್ ಎಸ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ನೋಡಿ ಕಲಿಯಬೇಕು ಎಂದಿದ್ದಾರೆ. ಈ ಹಿಂದೆಯೇ ರಾಹುಲ್, ಕಾಂಗ್ರೆಸ್ ಸೇವಾದಳದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಸೇವಾದಳದಿಂದ ಬರ್ತಿದ್ದರು. ನಂತ್ರ ಸಂಘಟನೆ ಬಲ ಕಳೆದುಕೊಂಡಿತ್ತು. ಮತ್ತೆ ಸೇವಾದಳ ಬಲ ಪಡೆಯಲಿದೆ ಎಂದು ರಾಹುಲ್ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಕಠಿಣ ಕೆಲಸಕ್ಕೆ ಹೆದರುತ್ತಾರೆ. ಆದಿವಾಸಿ ಜನರು ಮೊದಲು ಕಾಂಗ್ರೆಸ್ ಗೆ ಮತ ನೀಡುತ್ತಿದ್ದರು. ಅವ್ರ ಬಳಿ ಹೋದ ಬಿಜೆಪಿ ಹಾಗೂ ಆರ್ ಎಸ್ ಎಸ್ ಅವ್ರ ಮನವೊಲಿಸಿದೆ. ಅವ್ರೀಗ ಬಿಜೆಪಿಗೆ ಮತ ನೀಡುತ್ತಾರೆಂದ ರಾಹುಲ್, 17 ನಿಮಿಷಗಳ ಕಾಲ ಮಾತನಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಹೇಳಿದ ಕಿವಿಮಾತನ್ನು ಯುಟ್ಯೂಬ್ ನಲ್ಲಿ ಅಪ್ಲೋಡ್ ಮಾಡಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...