alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಗೆ ”ವಿರಾಟ್” ಚಾಲೆಂಜ್ ನೀಡಿದ ರಾಹುಲ್ ಗಾಂಧಿ

ಪೆಟ್ರೋಲ್-ಡಿಸೇಲ್ ಬೆಲೆ ದಿನದಿನ ದಿನಕ್ಕೆ ಏರಿಕೆಯಾಗ್ತಿದೆ. ಸತತ 12ನೇ ದಿನ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿರೋದು ವಾಹನ ಸವಾರರ ನಿದ್ರೆಗೆಡಿಸಿದೆ. ಪೆಟ್ರೋಲ್ ಬೆಲೆ ಏರಿಕೆಯನ್ನು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸವಾಲೆಸೆದಿದ್ದಾರೆ.

ಎರಡು ದಿನಗಳಿಂದ ಫಿಟ್ನೆಸ್ ಚಾಲೆಂಜ್ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನರೇಂದ್ರ ಮೋದಿಗೆ ಫಿಟ್ನೆಸ್ ಚಾಲೆಂಜ್ ನೀಡಿದ್ದರು. ಇದನ್ನು ಸ್ವೀಕರಿಸಿರುವ ಮೋದಿ ಶೀಘ್ರದಲ್ಲಿಯೇ ವ್ಯಾಯಾಮ ವಿಡಿಯೋ ಪೋಸ್ಟ್ ಮಾಡುವುದಾಗಿ ಹೇಳಿದ್ದಾರೆ.

ಕೊಹ್ಲಿ ಚಾಲೆಂಜ್ ಸ್ವೀಕರಿಸಿರೋದು ಖುಷಿ ತಂದಿದೆ. ನಾನೊಂದು ಚಾಲೆಂಜ್ ನೀಡ್ತೇನೆ. ಪೆಟ್ರೋಲ್-ಡಿಸೇಲ್ ಬೆಲೆಯನ್ನು ಶೀಘ್ರವೇ ಇಳಿಸಿ. ನಿಮ್ಮ ಪ್ರತಿಕ್ರಿಯೆಗೆ ಕಾಯ್ತಿದ್ದೇನೆ. ಇಲ್ಲವಾದ್ರೆ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ರಾಹುಲ್ ಗಾಂಧಿ ಚಾಲೆಂಜ್ ಮಾಡಿದ್ದಾರೆ. ಇದಕ್ಕೆ ಮೋದಿ ಯಾವ ಪ್ರತಿಕ್ರಿಯೆ ನೀಡ್ತಾರೆ ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...