alex Certify ‘ಭಾರತ್ ಜೋಡೋ ಯಾತ್ರೆ’ಗೆ ಇಂದು ತೆರೆ: ಶ್ರೀನಗರದಲ್ಲಿ ರಾಹುಲ್ ಗಾಂಧಿ ಬೃಹತ್ ಶಕ್ತಿ ಪ್ರದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಾರತ್ ಜೋಡೋ ಯಾತ್ರೆ’ಗೆ ಇಂದು ತೆರೆ: ಶ್ರೀನಗರದಲ್ಲಿ ರಾಹುಲ್ ಗಾಂಧಿ ಬೃಹತ್ ಶಕ್ತಿ ಪ್ರದರ್ಶನ

ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿದ್ದ ‘ಭಾರತ್ ಜೋಡೋ ಪಾದಯಾತ್ರೆ’ ಇಂದು ಮುಕ್ತಾಯವಾಗಲಿದೆ.

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬೃಹತ್ ರ್ಯಾಲಿಯೊಂದಿಗೆ ಪಾದಯಾತ್ರೆ ಮುಕ್ತಾಯವಾಗಲಿದೆ. 134 ದಿನಗಳ ಕಾಲ 4080 ಕಿಲೋಮೀಟರ್ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಇಂದು ಮುಕ್ತಾಯವಾಗಲಿದ್ದು, ಶ್ರೀನಗರದಲ್ಲಿ ಪ್ರತಿಪಕ್ಷಗಳ ಜೊತೆಗೆ ರಾಹುಲ್ ಗಾಂಧಿ ಬೃಹತ್ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಶ್ರೀನಗರದ ಐತಿಹಾಸಿಕ ಲಾಲ್ ಚೌಕ್ ನಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ್ದಾರೆ. 75 ವರ್ಷಗಳ ಹಿಂದೆ ನೆಹರೂ ಲಾಲ್ ಚೌಕ್ ನಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದರು. ಅದಾದ 75 ವರ್ಷಗಳ ಬಳಿಕ ಧ್ವಜಾರೋಹಣ ಮಾಡಿದ ಎರಡನೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...