alex Certify
ಕನ್ನಡ ದುನಿಯಾ       Mobile App
       

Kannada Duniya

51 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚನೆ ಮಾಡಿದ ರಾಹುಲ್

ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರ ಕೈಗೊಳ್ಳಲು ಕಾರ್ಯಕಾರಿ ಸಮಿತಿ ರಚಿಸಲಾಗಿದೆ. ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಅನುಭವಿ ಹಾಗೂ ಯುವ ನಾಯಕರಿಗೆ ಸ್ಥಾನ ನೀಡಲಾಗಿದೆ. 23 ಸದಸ್ಯರು, 19 ಖಾಯಂ ಆಹ್ವಾನಿತ ಸದಸ್ಯರು, 9 ಆಹ್ವಾನಿತ ಸದಸ್ಯರನ್ನು ಕಾರ್ಯಕಾರಿ ಸಮಿತಿ ಒಳಗೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜುಲೈ 22ರಂದು ಮೊದಲ ಸಭೆ ಕರೆದಿದ್ದಾರೆ. ಯುವ ನಾಯಕರು ಹಾಗೂ ಅನುಭವಿ ನಾಯಕರ ಜೊತೆ ಸಮತೋಲನ ಸಾಧಿಸುವ ಪ್ರಯತ್ನ ನಡೆಸಿದ್ದಾರೆ.

ರಾಹುಲ್ ಗಾಂಧಿ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್, ಮೋತಿಲಾಲ್ ವೋರಾ, ಅಶೋಕ್ ಗೆಹ್ಲೋಟ್, ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ, ಎ.ಕೆ. ಆಂಟನಿ, ಅಹಮದ್ ಪಟೇಲ್, ಅಂಬಿಕಾ ಸೋನಿ, ಉಮ್ಮನ್ ಚಾಂಡಿ, ತರುಣ್ ಗೊಗೋಯಿ, ಸಿದ್ದರಾಮಯ್ಯ, ಹರೀಶ್ ರಾವತ್, ಆನಂದ್ ಶರ್ಮಾ, ಕುಮಾರಿ ಸೆಲ್ಜಾ, ಮುಕುಲ್ ವಾಸ್ನಿಕ್, ಅವಿನಾಶ್ ಪಾಂಡೆ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕರು ಸ್ಥಾನ ಪಡೆದಿದ್ದಾರೆ. 2019 ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕಾರಿ ಸಮಿತಿಯನ್ನು ಮತ್ತಷ್ಟು ಬಲಗೊಳಿಸಿದ್ದಾರೆ ರಾಹುಲ್.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...