alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅರೆಸ್ಟ್

rahul-gg-dehli

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ ಜಾರಿಗೆ ಒತ್ತಾಯಿಸಿ, ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಸೈನಿಕನ ಕುಟುಂಬದವರ ಭೇಟಿಗೆ ಮುಂದಾದ, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು 2 ಬಾರಿ ಬಂಧಿಸಲಾಗಿದೆ.

ನಿವೃತ್ತ ಸೈನಿಕ ಹರಿಯಾಣದ ರಾಮ್ ಕಿಶನ್ ಗ್ರೇವಾಲ್, ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ ಜಾರಿಗೆ ಹೋರಾಟ ನಡೆಸಿ, ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದರು. ಸ್ಪಂದನೆ ವ್ಯಕ್ತವಾಗದ ಹಿನ್ನಲೆಯಲ್ಲಿ ಮನನೊಂದು ಅವರು ದೆಹಲಿಯ ಜಂತರ್ ಮಂತರ್ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಧ್ಯಾಹ್ನ ಆಸ್ಪತ್ರೆಯ ಸಮೀಪದಲ್ಲಿ ರಾಮ್ ಕಿಶನ್ ಕುಟುಂಬದವರನ್ನು ಭೇಟಿ ಮಾಡಲು ಬಂದಿದ್ದ ರಾಹುಲ್ ಗಾಂಧಿ ಅವರನ್ನು ಪೊಲೀಸರು ತಡೆದಿದ್ದಾರೆ.

ಅವರು ಅಲ್ಲೇ ಪ್ರತಿಭಟನೆ ನಡೆಸಿದ್ದು, ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ರಾಹುಲ್ ಅವರನ್ನು ವಶಕ್ಕೆ ಪಡೆದು, ಸುಮಾರು 45 ನಿಮಿಷಗಳ ಕಾಲ ಮಂದಿರ್ ಮಾರ್ಗ್ ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ.

ಅಲ್ಲಿಂದ ಹೊರಬಂದ ರಾಹುಲ್ ಗಾಂಧಿ, ಸಂಜೆಯ ನಂತರ ರಾಮ್ ಕಿಶನ್ ಕುಟುಂಬದವರನ್ನು ಭೇಟಿ ಮಾಡಲು ತೆರಳಿದ್ದಾರೆ. ಅವರೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೊದಲಾದವರು ಕೂಡ ತೆರಳಿದ್ದು, ಪೊಲೀಸರು 2 ನೇ ಬಾರಿಗೆ ರಾಹುಲ್ ಗಾಂಧಿ ಹಾಗೂ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ರಾಮ್ ಕಿಶನ್ ಕುಟುಂಬದವರೊಂದಿಗೂ ಪೊಲೀಸರು ಅನುಚಿತ ವರ್ತನೆ ತೋರಿದ್ದು, ಪೊಲೀಸರ ಈ ಕ್ರಮಕ್ಕೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...