alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆಗೆ ದಾಖಲಾಗಿರುವ ವಾಜಪೇಯಿಯವರನ್ನು ಭೇಟಿ ಮಾಡಿದ ರಾಹುಲ್

ಅನಾರೋಗ್ಯದ ಹಿನ್ನೆಲೆಯಲ್ಲಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ಭೇಟಿ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

93 ವರ್ಷದ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯದಲ್ಲಿ ಇಂದು ಕೊಂಚ ಏರುಪೇರು ಕಂಡ ಕಾರಣ ಅವರ ಆರೋಗ್ಯ ಪರಿಸ್ಥಿತಿಯ ತಪಾಸಣೆ ನಡೆಸುತ್ತಿದ್ದ ವೈದ್ಯರು, ಆಸ್ಪತ್ರೆಗೆ ದಾಖಲಿಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಜಪೇಯಿ ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿಯವರ ಆರೋಗ್ಯ ಪರಿಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...