alex Certify
ಕನ್ನಡ ದುನಿಯಾ       Mobile App
       

Kannada Duniya

“ರಾಷ್ಟ್ರವಿರೋಧಿ ಶಕ್ತಿಗಳಿಗೆ ಕೇಜ್ರಿವಾಲ್ ನೆರವು’’

rahul-gandhi-3

ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನು ಎರಡೇ ದಿನ ಬಾಕಿ ಇದೆ. ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆ ಬೀಳಲಿದ್ದು, ರಾಜಕೀಯ ನಾಯಕರು ಕೊನೆಯ ದಿನ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸಂಗ್ರೂರ್ ನಲ್ಲಿ ಪ್ರಚಾರ ಕೈಗೊಂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ ರಾಹುಲ್, ಬಿಜೆಪಿ ವಿರುದ್ಧವೂ ಕಿಡಿಕಾರಿದ್ದಾರೆ. ಆಮ್ ಆದ್ಮಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧವೂ ದೊಡ್ಡ ಆರೋಪ ಮಾಡಿದ್ದಾರೆ. ಪಂಜಾಬ್ ನಲ್ಲಿ ರಾಷ್ಟ್ರವಿರೋಧಿ ಶಕ್ತಿಗಳ ಬಲ ಹೆಚ್ಚಿಸುವ ಕೆಲಸ ಮಾಡ್ತಿದ್ದಾರೆಂದು ದೂರಿದ್ದಾರೆ. ಪಂಜಾಬ್ ಬ್ಲಾಸ್ಟ್ ನಡೆಸುವ ದುಷ್ಕರ್ಮಿಗಳಿಗೆ ಬೆಂಬಲ ನೀಡ್ತಿದ್ದಾರೆಂದು ರಾಹುಲ್ ಆರೋಪ ಮಾಡಿದ್ದಾರೆ. ಅಂತವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದು ಪಂಜಾಬ್ ಗೆ ಅಪಾಯಕಾರಿಯಾಗಲಿದೆ ಎಂದು ದೂರಿದ್ದಾರೆ.

ಫೆಬ್ರವರಿ 4ರಂದು ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಎಲ್ಲ ತಯಾರಿ ಭರದಿಂದ ಸಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...