alex Certify
ಕನ್ನಡ ದುನಿಯಾ       Mobile App
       

Kannada Duniya

ನ್ಯಾಶನಲ್ ಹೆರಾಲ್ಡ್ ಪ್ರಕರಣ : ಸೋನಿಯಾ, ರಾಹುಲ್ ನಿರಾಳ

sonia-rahul-gandhi-parliament-protest_650x400_81438929839

ಪತ್ರಿಕೆ ಖರೀದಿ ಹಗರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಪಟಿಯಾಲ ಕೋರ್ಟ್ ವಜಾಗೊಳಿಸಿದೆ. ನ್ಯಾಶನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಪಟ್ಟ 5000 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಿರುವ ಆರೋಪ ಸೋನಿಯಾ ಹಾಗೂ ರಾಹುಲ್ ಮೇಲಿದೆ.

ಅಕೌಂಟ್ ವಿವರ ಹಾಗೂ ತೆರಿಗೆ ಪಾವತಿಯ ದಾಖಲೆ ಕೋರಿ ಸುಬ್ರಮಣಿಯನ್ ಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ ಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡಿದ್ದು, ರಾಹುಲ್ ಮತ್ತು ಸೋನಿಯಾ ನಿರಾಳರಾಗಿದ್ದಾರೆ. 1938ರಲ್ಲಿ ನ್ಯಾಶನಲ್ ಹೆರಾಲ್ಡ್ ಪತ್ರಿಕೆಯನ್ನು ಜವಾಹರ ಲಾಲ್ ನೆಹರೂ ಆರಂಭಿಸಿದ್ದರು. ಆರ್ಥಿಕ ಸಂಕಷ್ಟದಿಂದಾಗಿ 2008ರಲ್ಲಿ ಪತ್ರಿಕೆಯ ಪ್ರಸಾರ ಬಂದ್ ಆಗಿತ್ತು. ನ್ಯಾಶನಲ್ ಹೆರಾಲ್ಡ್ ಪತ್ರಿಕೆಗೆ ಸೇರಿದ ದೆಹಲಿಯಲ್ಲಿರುವ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ನಾಯಕರು ಕೇವಲ 50 ಲಕ್ಷ ರೂಪಾಯಿಗೆ ಪತ್ರಿಕೆಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆಂಬ ಆರೋಪವಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...