alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಅಧಿಕಾರ ಸ್ವೀಕಾರ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಅಧ್ಯಕ್ಷೆಯಾದ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗೆ ಅಧಿಕಾರ ಹಸ್ತಾಂತರಿಸಿದ್ರು. ದೆಹಲಿಯ ಅಕ್ಬರ್ ರಸ್ತೆಯಲ್ಲಿರೋ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ರಾಹುಲ್ ಗಾಂಧಿ ಹೊಸ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಎಂ. ರಾಮಚಂದ್ರನ್ ಅವರಿಂದ ರಾಹುಲ್ ಪ್ರಮಾಣಪತ್ರವನ್ನು ಸ್ವೀಕರಿಸಿದ್ರು. ಎಐಸಿಸಿಯ 6ನೇ ಅಧ್ಯಕ್ಷರಾಗಿ ರಾಹುಲ್ ಆಯ್ಕೆಯಾಗಿದ್ದಾರೆ.

ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಬಳಿಕ ಕಾಂಗ್ರೆಸ್ ಜವಾಬ್ಧಾರಿ ರಾಹುಲ್ ಗಾಂಧಿ ಅವರ ಹೆಗಲೇರಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. 19 ವರ್ಷಗಳ ಕಾಲ ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...