alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಎಟಿಎಂ ಮುಂದೆ ಕಾಣಿಸಿಕೊಂಡ ರಾಹುಲ್ ಗಾಂಧಿ

rahul

500 ಹಾಗೂ ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮೇಲೆ ನಿಷೇಧ ಹೇರಿ 13 ದಿನವಾಗಿದೆ. ಇಂದು ಬೆಳ್ಳಂಬೆಳಿಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಜನರ ಸಮಸ್ಯೆ ಆಲಿಸಿದ್ದಾರೆ. ದೆಹಲಿಯ ಜಹಂಗಿರ್ಪುರಿಯಲ್ಲಿರುವ ಎಟಿಎಂ ಮುಂದೆ ಕ್ಯೂನಲ್ಲಿ ನಿಂತಿದ್ದ ಜನರನ್ನು ಭೇಟಿ ಮಾಡಿ,ಅವರ ಸಮಸ್ಯೆ ಆಲಿಸಿದ್ದಾರೆ.

ರಾಹುಲ್ ಗಾಂಧಿ ಎಟಿಎಂ ಮುಂದೆ ಕಾಣಿಸಿಕೊಂಡಿದ್ದು ಇದೇ ಮೊದಲಲ್ಲ. ಈ ಹಿಂದೆ ಮುಂಬೈನಲ್ಲಿ ಕೂಡ ಅವರು ಜನರ ಜೊತೆ ಮಾತುಕತೆ ನಡೆಸಿದ್ದರು. ಕಪ್ಪುಹಣ ನಿಯಂತ್ರಣಕ್ಕೆ ಮೋದಿ ಸರ್ಕಾರ ತಂದಿರುವ ನೋಟು ನಿಷೇಧದಿಂದ ಜನಸಾಮಾನ್ಯರಿಗೆ ತುಂಬ ತೊಂದರೆಯಾಗ್ತಿದೆ ಎಂದು ಜನರು ಕಿಡಿಕಾರಿದ್ದಾರೆ. ರಾಹುಲ್ ಮುಂದೆ ತಮ್ಮ ನೋವುಗಳನ್ನು ಹಂಚಿಕೊಂಡಿದ್ದಾರೆ.

ಚಳಿಗಾಲ ಅಧಿವೇಶನದ ನಾಲ್ಕನೇ ದಿನವಾದ ಇಂದು, ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಹುಲ್ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...