alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದೂಯೇತರ ಕಾಲಂನಲ್ಲಿ ಸಹಿ ಹಾಕಿದ ರಾಹುಲ್

ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಅವರು ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಿಂದೂಯೇತರ ಕಾಲಂನಲ್ಲಿ ಸಹಿ ಹಾಕಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ಸೌರಾಷ್ಟ್ರದ ಸೋಮನಾಥ ದೇವಾಲಯಕ್ಕೆ ಭೇಟಿ ನೀಡುವವರು ಸಂದರ್ಶಕರ ಪುಸ್ತಕದಲ್ಲಿ ಸಹಿ ಮಾಡಬೇಕಿದೆ. ಇಂದು ಪ್ರಚಾರದಲ್ಲಿ ಪಾಲ್ಗೊಂಡಿದ್ದ ರಾಹುಲ್ ಮತ್ತು ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರು ದೇವಾಲಯಕ್ಕೆ ಭೇಟಿ ನೀಡಿದ್ದು, ನೋಂದಣಿ ಪುಸ್ತಕದಲ್ಲಿ ಹಿಂದೂಯೇತರ ಕಾಲಂನಲ್ಲಿ ತಮ್ಮ ಹೆಸರನ್ನು ಬರೆದು ಸಹಿ ಹಾಕಿದ್ದಾರೆ.

ಗುಜರಾತ್ ಚುನಾವಣೆ ಪ್ರಚಾರದ ವೇಳೆ ವಿವಿಧೆಡೆ ತೆರಳುವ ರಾಹುಲ್ ಗಾಂಧಿ, ಮೊದಲಿಗೆ ಸ್ಥಳೀಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಅದೇ ರೀತಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಅವರು ಹಿಂದೂಯೇತರ ಕಾಲಂನಲ್ಲಿ ಸಹಿ ಮಾಡಿದ್ದಾರೆನ್ನಲಾಗಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ರಾಹುಲ್ ಚುನಾವಣೆ ಘೋಷಣೆಯಾದ ಬಳಿಕ ಗುಜರಾತ್ ಗೆ 6 ನೇ ಸಲ ಭೇಟಿ ನೀಡಿದ್ದಾರೆ. ಗಿರ್ ಸೋಮನಾಥ್, ಅಮ್ರೇಲಿ, ಭಾವಾನಗರ ಮೊದಲಾದ ಕಡೆ ಪ್ರಚಾರ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...