alex Certify
ಕನ್ನಡ ದುನಿಯಾ       Mobile App
       

Kannada Duniya

ರಾಯ್ಪುರ ಮೆಡಿಕಲ್ ಕಾಲೇಜಿನಲ್ಲಿ 3 ಮಕ್ಕಳ ಸಾವು

gorakhpur-jpeg_1503296053_618x347

ಉತ್ತರ ಪ್ರದೇಶದ ಗೋರಕ್ಪುರ ಬಿ ಆರ್ ಡಿ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕದ ಕೊರತೆಯಿಂದ ಮುಗ್ಧ ಮಕ್ಕಳ ಮಾರಣ ಹೋಮವಾಯ್ತು. ಈಗ ರಾಯ್ಪುರ ಮೆಡಿಕಲ್ ಕಾಲೇಜಿನ ಸರದಿ. ರಾಯ್ಪುರ ಬಿ ಆರ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಮೂರು ಮಕ್ಕಳು ಸಾವನ್ನಪ್ಪಿವೆ.

ಆಮ್ಲಜನಕ ಸಿಗದೆ ಮಕ್ಕಳು ಸಾವನ್ನಪ್ಪಿವೆ ಎಂದು ಮೃತ ಮಕ್ಕಳ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಛತ್ತೀಸ್ಗಡ ಮುಖ್ಯಮಂತ್ರಿ ರಮಣ್ ಸಿಂಗ್ ತನಿಖೆಗೆ ಆದೇಶ ನೀಡಿದ್ದಾರೆ.

ಆಗಸ್ಟ್ 11ರಂದು ಗೋರಕ್ಪುರ ಬಿ ಆರ್ ಡಿ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕದ ಕೊರತೆಯಿಂದ 30 ಮುಗ್ಧ ಮಕ್ಕಳು ಸಾವನ್ನಪ್ಪಿದ್ದವು. ಇದ್ರ ನಂತ್ರ ಪ್ರತಿದಿನ ಮಕ್ಕಳ ಸಾವಿನ ಸಂಖ್ಯೆ ಏರ್ತಾನೆ ಹೋಯ್ತು. ಈವರೆಗೆ 70ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿವೆ. ಆಮ್ಲಜನಕದ ಕೊರತೆಯಿಂದ ಮಕ್ಕಳು ಸಾವನ್ನಪ್ಪಿವೆ ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿತ್ತು. ಆದ್ರೆ ಇದನ್ನು ಸರ್ಕಾರ ತಳ್ಳಿ ಹಾಕಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...