alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಸ್ತಾನದಲ್ಲಿನ ಗೆಲುವಿಗೆ ರಾಹುಲ್ ಹೇಳಿದ್ದೇನು…?

ಈ ವರ್ಷದ ಅಂತ್ಯದಲ್ಲಿ ರಾಜಸ್ತಾನ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯತ್ತಿದ್ದು, ಇದರ ಮಧ್ಯೆ ನಡೆದ ಎರಡು ಲೋಕಸಭಾ ಹಾಗೂ ಒಂದು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಈ ಹಿಂದೆ ಈಗ ಉಪ ಚುನಾವಣೆ ನಡೆದ ಕ್ಷೇತ್ರಗಳಿಂದ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿದ್ದರೆಂಬುದು ಗಮನಾರ್ಹ.

ಗೆಲುವಿನ ಕುರಿತು ಸಂತಸಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹಲ್ ಗಾಂಧಿ, ಈ ಗೆಲುವಿಗಾಗಿ ರಾಜಸ್ತಾನದ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಎಲ್ಲ ಕಾರ್ಯಕರ್ತರನ್ನು ಅಭಿನಂದಿಸಿದ್ದಾರಲ್ಲದೆ, ಉಪ ಚುನಾವಣೆಯಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸುವ ಮೂಲಕ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...