alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಲಿಂಡರ್ ಸ್ಫೋಟದಿಂದ ಸ್ಮಶಾನವಾಯ್ತು ಮದುವೆ ಮನೆ

ರಾಜಸ್ತಾನದ ಬೀವಾರ್ ನಗರದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಸಿಲಿಂಡರ್ ಸ್ಪೋಟಿಸಿದೆ. ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ 6 ಜನರು ದುರ್ಮರಣಕ್ಕೀಡಾಗಿದ್ದಾರೆ. ಸಿಲಿಂಡರ್ ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ ಹೋಟೆಲ್ ಒಂದರಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. 6 ಜನರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರೋ ಐವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಹೋಟೆಲ್ ಕಟ್ಟಡಕ್ಕೂ ಹಾನಿಯಾಗಿದೆ. ಪಾರ್ಕಿಂಗ್ ಲಾಟ್ ನಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಕೂಡ ಜಖಂಗೊಂಡಿವೆ. ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿತ್ತು, ಹಾಗಾಗಿ ಸ್ಫೋಟ ಸಂಭವಿಸಿರಬಹುದು ಅಂತಾ ಅಗ್ನಿಶಾಮಕ ಸಿಬ್ಬಂದಿ ಶಂಕಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...