alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಸ್ಥಾನದಲ್ಲಿ ಗರ್ಭಿಣಿ, ಗುಜರಾತ್ ನಲ್ಲಿ ಬಾಲಕನ ರಕ್ಷಣೆ

rain

ದೇಶದ ಅನೇಕ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ರಾಜಸ್ಥಾನ, ಗುಜರಾತ್ ಮಳೆಯ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ರಾಜಸ್ಥಾನದಲ್ಲಿ  ಕಳೆದ 9 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ 17ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆ ಮುಂದುವರೆದಿದೆ. ಗುಜರಾತಿನ ಪಟಾನ್ ದ ಬಿಸ್ಮಿಲ್ಲಾಗಢ ಗ್ರಾಮದಲ್ಲಿ ಪ್ರವಾಹದ ಮಧ್ಯೆ ಸಿಲುಕಿದ್ದ ಬಾಲಕನನ್ನು ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ. ಬಾಲಕನ ಕಾಲು ಮುರಿದಿದೆ ಎಂದು ಮೂಲಗಳು ಹೇಳಿವೆ.

ರಾಜಸ್ಥಾನದಲ್ಲಿ ಭಾರತೀಯ ಸೇನೆ ರಕ್ಷಣಾ ಕಾರ್ಯಕ್ಕಿಳಿದಿದೆ. ಸೋಮವಾರ ಬೆಳ್ಳಂಬೆಳಿಗ್ಗೆ ಪ್ರವಾಹದಲ್ಲಿ ಸಿಲುಕಿದ್ದ ಗರ್ಭಿಣಿ, ಎರಡು ತಿಂಗಳ ಶಿಶು ಜೊತೆ ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ. ರಾಜ್ಯದಲ್ಲಿ 10 ಜಿಲ್ಲೆಗಳು ಮಳೆಯ ಅಬ್ಬರಕ್ಕೆ ತತ್ತರಿಸಿವೆ.

ಹವಾಮಾನ ಇಲಾಖೆ ಪ್ರಕಾರ, ಸಿಕ್ಕಿಂ, ಜಾರ್ಖಂಡ್, ಉತ್ತರಖಂಡ, ಹರಿಯಾಣ, ಚಂಡೀಘಢ, ದಿಲ್ಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...