alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಬೆಂಬಲಕ್ಕೆ ನಿಂತ ರಜನಿಕಾಂತ್

ಸೂಪರ್ ಸ್ಟಾರ್ ರಜನಿಕಾಂತ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ. ಟ್ವೀಟರ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಅಭಿಯಾನಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

ಸ್ವಚ್ಛತಾ ಹೀ ಸೇವಾ ಅಭಿಯಾನ ಶುರುಮಾಡಿದ ನರೇಂದ್ರ ಮೋದಿ ಚಿತ್ರರಂಗದ ಅನೇಕ ದಿಗ್ಗಜರಿಗೆ ಪತ್ರ ಬರೆದಿದ್ದರು. ಕೇಂದ್ರ ಸರ್ಕಾರದ ಈ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕೋರಿದ್ದರು. ಇದಕ್ಕೆ ರಜನಿಕಾಂತ್ ಉತ್ತರ ನೀಡಿದ್ದಾರೆ. ಮೋದಿ ಅಭಿಯಾನಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಅನೇಕ ದಿನಗಳಿಂದ ರಜನಿಕಾಂತ್ ರಾಜಕೀಯಕ್ಕೆ ಬರ್ತಾರೆ, ಮೋದಿ ಜೊತೆ ಕೈ ಜೋಡಿಸುತ್ತಾರೆಂಬ ಸುದ್ದಿ ಹರಿದಾಡುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ತಳವೂರುವ ಪ್ರಯತ್ನ ನಡೆಸುತ್ತಿದೆ. ರಜನಿಕಾಂತ್ ರಾಜಕೀಯಕ್ಕೆ ಬಂದ್ರೆ ಅವ್ರ ಗೆಲುವು ನಿಶ್ಚಿತ. ಇದನ್ನು ಮನಗಂಡಿರುವ ಬಿಜೆಪಿ, ರಜನಿ ಬಿಜೆಪಿಗೆ ಬಂದ್ರೆ ಸದಾ ಸ್ವಾಗತವಿದೆ ಎಂದು ಈ ಹಿಂದೆಯೇ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...