alex Certify
ಕನ್ನಡ ದುನಿಯಾ       Mobile App
       

Kannada Duniya

‘ಆರೋಗ್ಯವಾಗಿದ್ದಾರೆ ಸೂಪರ್ ಸ್ಟಾರ್ ರಜನಿ’

rajnikanth 346ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯಕ್ಕೆ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಅವರ ಕಛೇರಿ ವಕ್ತಾರರು ತೆರೆ ಎಳೆದಿದ್ದಾರೆ. ರಜನಿಕಾಂತ್ ಆರೋಗ್ಯವಾಗಿದ್ದಾರೆ. ಯಾವುದೇ ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ರಜನಿಕಾಂತ್ ಅವರು ತಮ್ಮ ಮುಂಬರುವ ‘ಕಬಾಲಿ’ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಇದೀಗ ಕುಟುಂಬ ಸದಸ್ಯರ ಜೊತೆ ಅಮೆರಿಕಾಕ್ಕೆ ತೆರಳಿದ್ದಾರೆನ್ನಲಾಗಿದೆ. ಇದೇ ವದಂತಿ ಹರಡಲು ಕಾರಣವೆಂದು ಹೇಳಲಾಗಿದ್ದು, ಅನಾರೋಗ್ಯಗೊಂಡಿರುವ ರಜನಿಕಾಂತ್ ಅವರನ್ನು ಚಿಕಿತ್ಸೆಗಾಗಿ ಅಮೆರಿಕಾಗೆ ಕರೆದುಕೊಂಡು ಹೋಗಲಾಗಿದೆ ಎಂಬ ಸುದ್ದಿ ಹಬ್ಬಿತ್ತು.

ಆದರೆ ರಜನಿಕಾಂತ್ ಕುಟುಂಬ ಸದಸ್ಯರ ಜೊತೆ ಅಮೆರಿಕಾಕ್ಕೆ ತೆರಳಿದ್ದು, ಜೊತೆಗೆ ತಮ್ಮ ಮುಂಬರುವ ಚಿತ್ರದ ಮೇಕಪ್ ಕುರಿತಂತೆ ಹಾಲಿವುಡ್ ನ ಖ್ಯಾತ ಮೇಕಪ್ ಆರ್ಟಿಸ್ಟ್ ಗಳ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...