alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ಪಕ್ಷ ಘೋಷಿಸಿದ ಸೂಪರ್ ಸ್ಟಾರ್ ರಜನಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಕುರಿತಾಗಿ ಮೂಡಿರುವ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಚೆನ್ನೈನ ರಾಘವೇಂದ್ರ ಕಲ್ಯಾಣ ಮಂದಿರದಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಿದ ರಜನಿಕಾಂತ್ ರಾಜಕೀಯ ಪ್ರವೇಶಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ರಾಜಕೀಯ ಪಕ್ಷದ ಕುರಿತಾಗಿ ಮುಂದೆ ಹೇಳ್ತೇನೆ. ರಾಜಕೀಯಕ್ಕೆ ಬರುತ್ತಿದ್ದೇನೆ ಎಂದು ಮೊದಲು ತಿಳಿಸುತ್ತೇನೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಯಾವುದೇ ಜಾತಿ ಬೇಧ ಭಾವ ಇಲ್ಲದ ಆಳ್ವಿಕೆ ನಡೆಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದ, ದೇವರ ಆಶೀರ್ವಾದದಿಂದ ಸ್ವಂತ ಪಕ್ಷವನ್ನು ಸ್ಥಾಪಿಸುತ್ತಿದ್ದೇನೆ. ಎಲ್ಲರ ಮೇಲೆ ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ಇದೆ. ತಮಿಳರ ಪರವಾಗಿ ನನ್ನ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ತಮ್ಮ ಭಾಷಣದಲ್ಲಿ ರಾಜಕೀಯ ಪಕ್ಷ, ನಿಲುವು, ಆಡಳಿತದ ಕಲ್ಪನೆಗಳ ಕುರಿತಾಗಿ ಪ್ರಸ್ತಾಪಿಸಿದ ಅವರು ಜನರ ಆಶೀರ್ವಾದ ಸಿಗುವ ನಂಬಿಕೆ ಇದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...