alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕಿಸ್ತಾನದ ವಿರುದ್ಧ ಮಹತ್ವದ ನಿರ್ಧಾರ ಕೈಗೊಳ್ಳಲಿದೆ ಭಾರತ

ಪಾಕಿಸ್ತಾನ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಮಾಡ್ತಿದೆ. ಇದ್ರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ ಸಂಬಂಧ ಇಂದು ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ದೆಹಲಿಯ ಗೃಹ ಸಚಿವಾಲಯದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಜಮ್ಮು-ಕಾಶ್ಮೀರ ಡಿಜಿಪಿ ಎಸ್ಪಿ ಕೂಡ ಭಾಗಿಯಾಗಲಿದ್ದಾರೆ. ಜಮ್ಮು-ಕಾಶ್ಮೀರ ಗಡಿ ಭದ್ರತೆ ಹಾಗೂ ಅಲ್ಲಿನ ಪರಿಸ್ಥಿತಿ ಸುಧಾರಣೆ ಬಗ್ಗೆ ಚರ್ಚೆ ನಡೆಯಲಿದೆ. ಇದ್ರ ಜೊತೆ ರಾಜ್ಯದ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಮಿಲಿಟರಿ ಕಾರ್ಯಾಚರಣೆ ನಡೆಯಬೇಕಾ? ಬೇಡ್ವಾ? ಎನ್ನುವ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

ವರದಿ ಪ್ರಕಾರ, ರಂಜಾನ್ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸದಿರಲು ನಿರ್ಧರಿಸಲಾಗಿತ್ತು. ರಂಜಾನ್ ನಂತ್ರ ಮಿಲಿಟರಿ ಕಾರ್ಯಾಚರಣೆ ಮುಂದುವರೆಸುವಂತೆ ಕೆಲ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಕಾರ್ಯಾಚರಣೆ ನಿಲ್ಲಿಸುವಂತೆ ಒತ್ತಡ ಹೇರಿದ್ದಾರೆ. ಮುಂದೇನು ಎಂಬ ಪ್ರಶ್ನೆಗೆ ಇಂದಿನ ಸಭೆಯಲ್ಲಿ ಉತ್ತರ ಸಿಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...