alex Certify
ಕನ್ನಡ ದುನಿಯಾ       Mobile App
       

Kannada Duniya

ಪುತ್ರನ ಪರ ಪ್ರಚಾರ ನಡೆಸಲ್ವಂತೆ ರಾಜನಾಥ್ ಸಿಂಗ್

rajnath-pankaj-580x395

ಸದ್ಯ ಎಲ್ಲರ ಕಣ್ಣು ಉತ್ತರ ಪ್ರದೇಶದ ಮೇಲಿದೆ. ಅಲ್ಲಿನ ವಿಧಾನಸಭಾ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಎನ್ನಲಾಗ್ತಾ ಇದೆ. ಬಿಜೆಪಿ, ಕಾಂಗ್ರೆಸ್-ಎಸ್ಪಿ ಸೇರಿದಂತೆ ಎಲ್ಲ ಪಕ್ಷಗಳೂ ಭರ್ಜರಿ ಪ್ರಚಾರದಲ್ಲಿ ನಿರತವಾಗಿವೆ. ಈ ಬಾರಿ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರಾಜನಾಥ್ ಸಿಂಗ್ ರ ಮಗ ಪಂಕಜ್ ಸಿಂಗ್ ಕೂಡ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಎಲ್ಲ ಪಕ್ಷಗಳೂ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿವೆ. ಆದ್ರೆ ರಾಜನಾಥ್ ಸಿಂಗ್ ಮಾತ್ರ ತಮ್ಮ ಮಗನ ಪರ ಪ್ರಚಾರ ನಡೆಸುವುದಿಲ್ಲ ಎಂದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ರಾಜನಾಥ್ ಸಿಂಗ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.

ರಾಜನಾಥ್ ಸಿಂಗ್ ಪುತ್ರ ಪಂಕಜ್ ಸಿಂಗ್ ಉತ್ತರ ಪ್ರದೇಶದ ನೋಯ್ಡಾದಿಂದ ಚುನಾವಣೆಗೆ ನಿಂತಿದ್ದಾರೆ. ಇದೇ ಮೊದಲ ಬಾರಿ ಬಿಜೆಪಿಯಿಂದ ಅವರಿಗೆ ಟಿಕೆಟ್ ಸಿಕ್ಕಿದೆ. ಪಂಕಜ್ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾನುವಾರ ಪ್ರಚಾರ ನಡೆಸಿದ್ದಾರೆ. ರಾಜನಾಥ್ ಸಿಂಗ್ ಪುತ್ರನಿಗೆ ಟಿಕೆಟ್ ನೀಡಿರುವುದು ವಿರೋಧ ಪಕ್ಷದ ವಾಗ್ಯುದ್ಧಕ್ಕೆ ಕಾರಣವಾಗಿದೆ. ಹಾಗಾಗಿ ಪುತ್ರನ ಪರ ಪ್ರಚಾರ ನಡೆಸದಿರಲು ರಾಜನಾಥ್ ನಿರ್ಧರಿಸಿದ್ದಾರೆ ಎನ್ನಲಾಗ್ತಾ ಇದೆ. ಮೊದಲಿನಿಂದಲೂ ರಾಜಕೀಯದಲ್ಲಿ ಸಕ್ರಿಯವಾಗಿರುವ ರಾಜನಾಥ್ ಸಿಂಗ್ ಪುತ್ರ ಅನೇಕ ಬಾರಿ ಚುನಾವಣೆಗೆ ನಿಲ್ತಾರೆ ಎಂಬ ಸುದ್ದಿಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...