alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸುಪ್ರೀಂನಲ್ಲಿ ಜೇಠ್ಮಲಾನಿ ಅರ್ಜಿ

ರಾಜ್ಯ ರಾಜ್ಯಪಾಲ ವಜುಬಾಯಿ ವಾಲಾ ವಿರುದ್ಧ ವಕೀಲ ರಾಮ್ ಜೇಠ್ಮಲಾನಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಜೇಠ್ಮಲಾನಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಪೀಠದಲ್ಲಿ ಈ ಬಗ್ಗೆ ವಿಚಾರಣೆ ನಡೆಸುವಂತೆ ಜೇಠ್ಮಲಾನಿ ಮನವಿ ಮಾಡಿದ್ದಾರೆ.

ರಾಜ್ಯಪಾಲರು ಸಂವಿಧಾನಾತ್ಮಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆಂದು ಜೇಠ್ಮಲಾನಿ ದೂರಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಜೇಠ್ಮಲಾನಿ ಅರ್ಜಿಯನ್ನು ಪುರಸ್ಕರಿಸಿದೆ. ನಾಳೆ ಮೂರು ನ್ಯಾಯಾಧೀಶರ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ.

ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಅರ್ಜಿ ಸಲ್ಲಿಸಿಲ್ಲ. ರಾಜ್ಯಪಾಲರ ಅಸಂವಿಧಾನಾತ್ಮಕ ಕ್ರಮ ಮನಸ್ಸಿಗೆ ನೋವುಂಟು ಮಾಡಿದೆ. ಹಾಗಾಗಿ ವೈಯಕ್ತಿಕವಾಗಿ ಅರ್ಜಿ ಸಲ್ಲಿಸಿರುವುದಾಗಿ ಜೇಠ್ಮಲಾನಿ ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...