alex Certify
ಕನ್ನಡ ದುನಿಯಾ       Mobile App
       

Kannada Duniya

ಡೇರಾ ಮುಖ್ಯಸ್ಥನಿಗೆ 10 ವರ್ಷವಲ್ಲ, 20 ವರ್ಷ ಜೈಲ್

ಚಂಡೀಗಡ: ಇಬ್ಬರು ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ಗೆ 10 ವರ್ಷವಲ್ಲ, 20 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.

ಐ.ಪಿ.ಸಿ. ಸೆಕ್ಷನ್ 376, 511 ರ ಅಡಿ ಆತನ ವಿರುದ್ಧ ದೋಷಾರೋಪ ದಾಖಲಾಗಿದೆ. ಮೊದಲ ಪ್ರಕರಣದಲ್ಲಿ 10 ವರ್ಷ, 2 ನೇ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಯನ್ನು ಪ್ರತ್ಯೇಕವಾಗಿ ಅನುಭವಿಸಬೇಕು.

ಎರಡೂ ಪ್ರಕರಣದಲ್ಲಿ ತಲಾ 15 ಲಕ್ಷ ರೂ. ದಂಡ ವಿಧಿಸಲಾಗಿದೆ. ಆತನಿಂದ 30 ಲಕ್ಷ ರೂ. ವಸೂಲು ಮಾಡಿ, ಸಂತ್ರಸ್ಥೆಯರಿಗೆ ತಲಾ 14 ಲಕ್ಷ ರೂ. ಪಾವತಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

2037 ರ ವರೆಗೆ ರಾಮ್ ರಹೀಂ ಸಿಂಗ್ ಜೈಲಿನಲ್ಲೇ ಕಾಲ ಕಳೆಯಬೇಕಿದೆ. ಸಿ.ಬಿ.ಐ. ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಪ್ ಸಿಂಗ್ ಅವರು, 2 ಪ್ರಕರಣದಲ್ಲಿ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

ತೀರ್ಪಿನ ವಿರುದ್ಧ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ರಾಮ್ ರಹೀಂ ಸಿಂಗ್ ಪರ ವಕೀಲರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...