alex Certify
ಕನ್ನಡ ದುನಿಯಾ       Mobile App
       

Kannada Duniya

ಡೇರಾ ಮುಖ್ಯಸ್ಥನಿಗೆ ಶಿಕ್ಷೆ ಪ್ರಕಟಣೆಗೆ ಕ್ಷಣಗಣನೆ

ಚಂಡೀಗಡ: ಡೇರಾ ಸಚ್ಚ ಸೌಧ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಪಂಚಕುಲ ಸಿ.ಬಿ.ಐ. ವಿಶೇಷ ನ್ಯಾಯಾಲಯ ಸೋಮವಾರ ಮಧ್ಯಾಹ್ನ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

ಇಬ್ಬರು ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ದೋಷಿಯಾಗಿ ರಾಮ್ ರಹೀಂ ಸಿಂಗ್ ಸದ್ಯ ರೋಹ್ಟಕ್ ಜೈಲಿನಲ್ಲಿದ್ದಾನೆ.

ಶುಕ್ರವಾರ ರಾಮ್ ರಹೀಂ ಸಿಂಗ್ ದೋಷಿ ಎಂದು ತೀರ್ಪು ಪ್ರಕಟವಾದ ಸಂದರ್ಭದಲ್ಲಿ ಆತನ ಬೆಂಬಲಿಗರು ಹಿಂಸಾಚಾರ ನಡೆಸಿದ್ದು, 38 ಮಂದಿ ಸಾವನ್ನಪ್ಪಿದ್ದರು.

ಮತ್ತೆ ಹಿಂಸಾಚಾರ ಮರುಕಳಿಸದಂತೆ ತಡೆಯಲು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಡೇರಾ ಆಶ್ರಮ ಇರುವ ಸಿರ್ಸಾದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಪಂಚಕುಲ ಸೇರಿದಂತೆ ಹರಿಯಾಣದ ಅನೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪಂಜಾಬ್, ದೆಹಲಿ, ಹರಿಯಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಕೆಲವೆಡೆ ಇಂಟರ್ ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ.

ಭದ್ರತಾ ದೃಷ್ಠಿಯಿಂದ ರೋಹ್ಟಕ್ ಜೈಲಲ್ಲೇ ರಾಮ್ ರಹೀಂ ಸಿಂಗ್ ಶಿಕ್ಷೆಯನ್ನು ಪ್ರಕಟಿಸಲಾಗುವುದು. ನ್ಯಾ. ಜಗದೀಪ್ ಸಿಂಗ್ ಜೈಲಿಗೆ ತೆರಳಿ ಅಲ್ಲಿಯೇ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...