alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಪಾಲರ ಹುದ್ದೆಗೆ ರಾಮ್ನಾಥ್ ಕೋವಿಂದ್ ರಾಜೀನಾಮೆ

_96545614_ramಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಬಿಹಾರದ ರಾಜ್ಯಪಾಲ ರಾಮ್ನಾಥ್ ಕೋವಿಂದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಹುದ್ದೆಗೆ ರಾಮ್ನಾಥ್ ಕೋವಿಂದ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ.

ಜೂನ್ 23 ರ ಬೆಳಿಗ್ಗೆ 11 ಗಂಟೆಗೆ ರಾಮ್ನಾಥ್ ಕೋವಿಂದ್ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆಂದು ಹೇಳಲಾಗಿದ್ದು, ಇದಕ್ಕಾಗಿ ಈಗಾಗಲೇ ಸಿದ್ದತೆಗಳು ನಡೆದಿವೆ. ರಾಮ್ನಾಥ್ ಕೋವಿಂದ್ ದೆಹಲಿಯಲ್ಲಿದ್ದು, ಬಿಜೆಪಿ ನಾಯಕರು ಅವರನ್ನು ಭೇಟಿಯಾಗಿದ್ದಾರೆ.

ರಾಮ್ನಾಥ್ ಕೋವಿಂದ್ ರನ್ನು ಅವಿರೋಧವಾಗಿ ಆಯ್ಕೆ ಮಾಡುವ ಪ್ರಯತ್ನಗಳು ನಡೆದಿದ್ದು, ವಿಪಕ್ಷಗಳ ನಾಯಕರನ್ನು ಬಿಜೆಪಿ ಮುಖಂಡರ ನಿಯೋಗ ಈಗಾಗಲೇ ಭೇಟಿಯಾಗಿ ಮಾತುಕತೆ ನಡೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...