alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ

kovind

ನವದೆಹಲಿ: ದೇಶದ 14 ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಇಂದು ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಮುಕ್ತಾಯವಾಗಿದ್ದು, ರಾಷ್ಟ್ರಪತಿ ಭವನದಲ್ಲಿ ಅವರು ವಿದಾಯದ ಭಾಷಣ ಮಾಡಿದ್ದಾರೆ.

ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್ ಪ್ರಮಾಣ ವಚನ ಬೋಧಿಸಲಿದ್ದಾರೆ.

ಸಮಾರಂಭದಲ್ಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಸ್ಪೀಕರ್ ಸುಮಿತ್ರಾ ಮಹಾಜನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಮೂರೂ ಸೇನಾಪಡೆಗಳ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...