alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರೇ ದಿನದಲ್ಲಿ ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ…!

ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ, ಕೇವಲ ಮೂರೇ ದಿನದಲ್ಲಿ ಶಿಕ್ಷೆ ಪ್ರಕಟವಾಗಿದೆ. ಮಧ್ಯ ಪ್ರದೇಶದ ಕೋರ್ಟ್ ಜೀವಾವಧಿ ಶಿಕ್ಷೆಯನ್ನು ನೀಡಿ ಆದೇಶಿಸಿದೆ. ಕೇವಲ ಮೂರು ದಿನಗಳಲ್ಲಿ ಪ್ರಕರಣ ಇತ್ಯರ್ಥವಾಗಿದ್ದು, ಆರೋಪಿ ತನ್ನ ಕೊನೆಯ ಉಸಿರು ಇರುವವರೆಗೂ ಕಂಬಿಯ ಹಿಂದೆ ಕಳೆಯಬೇಕಿದೆ.

ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಬಗ್ಗೆ ನ್ಯಾ. ಹಿತೇಂದ್ರ ದ್ವಿವೇದಿ ಬುಧವಾರ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದ, ಬಾಲಕಿಯ ಮೇಲೆ ಕಾಮುಕನ ಕಣ್ಣು ಬಿದ್ದಿದೆ. ಕಾಮುಕ ಬಾಲಕಿಯನ್ನು ಸರ್ಕಾರಿ ಶಾಲೆ ಬಳಿ ಕರೆದುಕೊಂಡು ಹೋಗಿ ರೇಪ್ ಮಾಡಿದ್ದಾನೆ. ಪೋಷಕರು ಬಾಲಕಿಯ ಹುಡುಕುವಾಗ, ಸರ್ಕಾರಿ ಶಾಲೆಯ ಬಳಿ ಬಾಲಕಿ ಪತ್ತೆಯಾಗಿದ್ದಾಳೆ. ಪೋಷಕರು ಬಾಲಕಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಪ್ರಕರಣ ಬಯಲಿಗೆ ಬಂದಿದೆ.

ಈ ಬಗ್ಗೆ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದರು. ವಿಚಾರಣೆ ವೇಳೆ 17 ಜನ ಸಾಕ್ಷಿ ಹೇಳಿದ್ದಾಗಿ ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...