alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾಮ’ಕ್ಕೊಪ್ಪದ ಬಾಲಕಿಗೆ ಬೆಂಕಿ ಹಚ್ಚಿದ ಕಾಮುಕ

Fire

ಇತ್ತೀಚೆಗೆ ಕಾಮುಕರ ಅಟ್ಟಹಾಸ ದೇಶದಲ್ಲಿ ಹೆಚ್ಚುತ್ತಿದ್ದು, ಅತ್ಯಾಚಾರಕ್ಕೊಪ್ಪದ ಅಪ್ರಾಪ್ತ ಬಾಲಕಿಯನ್ನು ಕಾಮುಕ ಯುವಕನೊಬ್ಬ ಸಜೀವವಾಗಿ ದಹನ ಮಾಡಿರುವ ಆಘಾತಕಾರಿ ಘಟನೆ ಔರಂಗಬಾದ್ ನಲ್ಲಿ ನಡೆದಿದೆ.

17 ವರ್ಷದ ಬಾಲಕಿ ಒಬ್ಬಳೇ ಇದ್ದ ಸಮಯದಲ್ಲಿ ಭೋಲ ಎಂಬ ಕಾಮುಕ ಯುವಕ ಆಕೆಯ ಮನೆಗೆ ನುಗ್ಗಿದ್ದು, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಮಯದಲ್ಲಿ ಆಕೆ ಪ್ರತಿರೋಧ ಒಡ್ಡಿದ್ದು, ಇದರಿಂದ ಆಕ್ರೋಶಗೊಂಡ ಯುವಕ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಜೀವಂತವಾಗಿ ದಹನ ಮಾಡಿದ್ದಾನೆ ಎನ್ನಲಾಗಿದೆ.

ಈಗಾಗಲೇ ಬಾಲಕಿಯ ಚಿಕ್ಕಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಯುವಕನ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...