alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಿಗೆ ಕೋರ್ಟ್ ನೀಡ್ತು ಶಿಕ್ಷೆ: ಹೊರ ಬರ್ತಿದ್ದಂತೆ ನಡೀತು ಇಂಥ ಘಟನೆ

ಅತ್ಯಾಚಾರಿಯೊಬ್ಬನಿಗೆ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ತೀರ್ಪು ಕೇಳಿದ ನಂತ್ರ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಶಿಕ್ಷೆ ಅನುಭವಿಸಲು ಜೈಲಿಗೆ ಹೋಗಬೇಕಿದ್ದ ಆರೋಪಿ ಇಹಲೋಕ ತ್ಯಜಿಸಿದ್ದಾನೆ.

ಘಟನೆ ಪಂಜಾಬ್ ನ ಮೊಗದಲ್ಲಿ ನಡೆದಿದೆ. ಇಲ್ಲಿನ ಸ್ಥಳೀಯ ಕೋರ್ಟ್ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 45 ವರ್ಷದ ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. 7 ವರ್ಷ ಜೈಲು ಶಿಕ್ಷೆ ಹಾಗೂ 35 ಸಾವಿರ ದಂಡ ವಿಧಿಸಿದೆ. ತೀರ್ಪು ಹೊರಬಂದ ನಂತ್ರ ಅಪರಾಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲಿದ್ದ ರೂಮಿನಲ್ಲಿ ಆರೋಪಿಯನ್ನು ಇಟ್ಟಿದ್ದಾರೆ.

ಕೆಲವೇ ಸಮಯದಲ್ಲಿ ಅಪರಾಧಿ ಕೆಳಗೆ ಕುಸಿದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಹೃದಯಾಘಾತದಿಂದ ಅಪರಾಧಿ ಮೃತಪಟ್ಟಿದ್ದಾನೆಂದು ವೈದ್ಯರು ಹೇಳಿದ್ದಾರೆ. ಅಪರಾಧಿಯನ್ನು ಕಳೆದುಕೊಂಡ ಕುಟುಂಬ ಪೊಲೀಸ್ ಠಾಣೆಯಲ್ಲಿಯೇ ಗಲಾಟೆ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...