alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಣ್ಣುಮಕ್ಕಳ ಶಾಲೆ ಬಿಡಿಸಿದ ಪೋಷಕರು, ಕಾರಣ ಗೊತ್ತಾ..?

rape hariyana

ಹರಿಯಾಣದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ತಲ್ಲಣ ಮೂಡಿಸಿದ್ದು, ಶಾಲಾ- ಕಾಲೇಜಿಗೆ ಹೆಣ್ಣುಮಕ್ಕಳನ್ನು ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಈಗಾಗಲೇ ಬಹುತೇಕ ಹೆಣ್ಣುಮಕ್ಕಳು ಶಾಲೆ ಬಿಟ್ಟಿದ್ದಾರೆ.

ಹರಿಯಾಣದ ರೆವಾರಿ ಸಮೀಪದ ಗ್ರಾಮವೊಂದರಲ್ಲಿ ಏಪ್ರಿಲ್ 18ರಂದು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದು, ಇದರಿಂದಾಗಿ ಶಾಲಾ- ಕಾಲೇಜಿಗೆ ಹೋಗಿ ಬರಲು ಹೆಣ್ಣುಮಕ್ಕಳು ಭಯಪಡುವಂತಾಗಿದೆ. ಮಕ್ಕಳನ್ನು ಶಾಲಾ- ಕಾಲೇಜಿಗೆ ಕಳುಹಿಸಲು ಒಪ್ಪದ ಸಮಖೇರ ಗ್ರಾಮದ ಪೋಷಕರು ಶಾಲೆ ಬಿಡಿಸಿದ್ದಾರೆ. ಈ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮಾತ್ರ ಇದ್ದು, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಪಕ್ಕದ ಗ್ರಾಮಕ್ಕೆ ಹೋಗಿಬರಬೇಕಿದೆ.

ಪಕ್ಕದ ಗ್ರಾಮಕ್ಕೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದೇಟು ಹಾಕಿದ್ದು, ಹೈಸ್ಕೂಲ್ ಮತ್ತು 12 ನೇ ತರಗತಿ ಓದುವ 38 ವಿದ್ಯಾರ್ಥಿನಿಯರು ಶಾಲೆ, ಕಾಲೇಜು ಬಿಟ್ಟಿದ್ದಾರೆ. ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.

ಶಾಲೆ ಬಿಟ್ಟ ವಿದ್ಯಾರ್ಥಿನಿಯರು ಶಿಕ್ಷಣ ಮುಂದುವರೆಸಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಯಶ್ ಗರ್ಗ್ ಅವರು ಶಾಲಾ, ಕಾಲೇಜಿಗೆ ಬರುವ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಲಾಗುವುದು ಎಂದು ಭರವಸೆ ನೀಡಿದ್ದರೂ ಗ್ರಾಮಸ್ಥರು ಒಪ್ಪಿಲ್ಲ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...