alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ನಿವಾಸದ ಬಳಿಯೇ ವಿದ್ಯಾರ್ಥಿನಿ ಮೇಲೆ ರೇಪ್

sexually-harassed

ದಿನದಿಂದ ದಿನಕ್ಕೆ ಅತ್ಯಾಚಾರ ಘಟನೆಗಳು ಹೆಚ್ಚಾಗುತ್ತಿದ್ದು, ಹೆಣ್ಣುಮಕ್ಕಳಿಗೆ ರಕ್ಷಣೆಯೇ ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ. ದೇಶದಲ್ಲಿ ಹೆಚ್ಚಾಗಿರುವ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಎಷ್ಟೆಲ್ಲಾ ಕಾನೂನು ರೂಪಿಸಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ.

ಕಾಮಾಂಧರು ಮುಖ್ಯಮಂತ್ರಿ ನಿವಾಸದ ಸಮೀಪವೇ ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಶವ ಉತ್ತರಪ್ರದೇಶದ ಲಖ್ನೋದಲ್ಲಿರುವ ಸಿಎಂ ನಿವಾಸದ ಸಮೀಪ ಪತ್ತೆಯಾಗಿದೆ. ವಿದ್ಯಾರ್ಥಿನಿ ಲಖ್ನೋದ ರಾಣಿ ಲಕ್ಷ್ಮಿಬಾಯಿ ಕಾಲೇಜ್ ನಲ್ಲಿ 12ನೇ ತರಗತಿ ಓದುತ್ತಿದ್ದಳು. ಆಕೆ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.ಈ ಬಗ್ಗೆ ಕೂಡಲೇ ಕ್ರಮಕೈಗೊಂಡು ತಪ್ಪಿತಸ್ಥರನ್ನು ಬಂಧಿಸಬೇಕೆಂದು ವಿರೋಧ ಪಕ್ಷಗಳ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಅಖಿಲೇಶ್ ಯಾದವ್ ಪೊಲೀಸರಿಗೆ ಸೂಚನೆ ನೀಡಿ, ಶೀಘ್ರ ಆರೋಪಿಗಳ ಪತ್ತೆ ಮಾಡಲು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...