alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಮನೆ ಎದುರು ವಿಷ ಸೇವಿಸಿದ ಯುವತಿ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ಅತ್ಯಾಚಾರ ಸಂತ್ರಸ್ಥೆ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮನೆಯ ಎದುರಲ್ಲೇ ವಿಷ ಸೇವಿಸಿದ್ದಾರೆ.

ಶನಿವಾರ ಸಿ.ಎಂ. ನಿವಾಸಕ್ಕೆ ನ್ಯಾಯಕೇಳಲು ಆಗಮಿಸಿದ್ದ ಸಂತ್ರಸ್ಥೆ ಅಲ್ಲಿದ್ದವರು ಸ್ಪಂದಿಸದ ಕಾರಣ, ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಕೆಯ ಸ್ಥಿತಿ ಗಂಭೀರವಾಗಿದ್ದು, ಹಮೀದಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತ್ಯಾಚಾರ ಎಸಗಿದವರ ವಿರುದ್ಧ ದೂರು ನೀಡಿದ್ದರೂ, ಪೊಲೀಸರು ಕ್ರಮಕೈಗೊಂಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಆಕೆ ವಿಷ ಸೇವಿಸಿದ್ದಾರೆ. ನಂತರದಲ್ಲಿ ಪೊಲೀಸ್ ಅಧಿಕಾರಿಗಳು ಘಟನೆಯ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...