alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ತಂದೆಯಿಂದ ಆತ್ಮಹತ್ಯೆ ಯತ್ನ

ಉತ್ತರ ಪ್ರದೇಶ ಸರ್ಕಾರ ಹಾಗೂ ಪೊಲೀಸರು ಏನೇ ಹೇಳಲಿ ರಾಜ್ಯದಲ್ಲಿ ಮಹಿಳೆಯರು ಮಾತ್ರ ಸುರಕ್ಷಿತರಾಗ್ತಿಲ್ಲ. ರಾಜ್ಯದಲ್ಲಿ ನಿರಂತರ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರ್ತಿವೆ. ಪೀಡಿತರಿಗೆ ಸರಿಯಾಗಿ ನ್ಯಾಯ ಸಿಗ್ತಿಲ್ಲ. ಇದಕ್ಕೆ ಮೊರಾದಾಬಾದ್ ನಲ್ಲಿ ನಡೆದ ಘಟನೆ ಉತ್ತಮ ಉದಾಹರಣೆ.

ಮೊರಾದಾಬಾದ್ ನಲ್ಲಿ ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ತಂದೆ ನ್ಯಾಯಕ್ಕೆ ಮೊರೆಯಿಟ್ಟು ಸುಸ್ತಾಗಿದ್ದಾನೆ. ಬುಧವಾರ ಎಸ್ಪಿಪಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ಸೀಮೆ ಎಣ್ಣೆ ಸುರಿದುಕೊಂಡು ಬಂದಿದ್ದ ವ್ಯಕ್ತಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಳ್ಳುವ ಯತ್ನ ನಡೆಸಿದ್ದಾನೆ. ತಕ್ಷಣ ಬಂದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ.

10 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರವೆಸಗಲಾಗಿತ್ತು. ಈ ಬಗ್ಗೆ ಪೀಡಿತ ಕುಟುಂಬ ಪೊಲೀಸರಿಗೆ ದೂರು ನೀಡಿತ್ತು. ಪೊಲೀಸರು ಆರೋಪಿಯನ್ನು ಬಂಧಿಸದೆ ನಿರ್ಲಕ್ಷ್ಯ ತೋರಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...