alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೊಳಗಾದ ಬಾಲಕಿ ಮಗುವಿಗೆ ಜನ್ಮ ನೀಡಿದ ನಂತ್ರ ಮಾಡಿದ್ಲು…!

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿ ಮಗುವನ್ನು ಶೌಚಾಲಯದ ಕಿಟಕಿಯಿಂದ ಹೊರಕ್ಕೆಸೆದ ಘಟನೆ ನಡೆದಿದೆ. ಮುಂಬೈನಲ್ಲಿ ಈ ಘಟನೆ ನಡೆದಿದ್ದು, 14 ವರ್ಷದ ಬಾಲಕಿಯನ್ನು ಪೊಲೀಸರು ಹುಡುಕಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಬಾಲಕಿಯೊಬ್ಬಳು ಶೌಚಾಲಯವೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ನಂತ್ರ ಮಗುವನ್ನು ಶೌಚಾಲಯದ ಕಿಟಕಿಯಿಂದ ಎಸೆದಿದ್ದಾಳೆ. ಶಿಶು ಅಳುವ ಶಬ್ದ ಕೇಳಿ ಅಲ್ಲಿಗೆ ಬಂದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಶಿಶುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ನಂತ್ರ ಮಗುವಿನ ತಾಯಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕಿ ಸೋದರ ಸಂಬಂಧಿಯೇ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ವಿಷ್ಯವನ್ನು ಬೇರೆಯವರಿಗೆ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನಂತೆ. ಬಾಲಕಿ ಕುಟುಂಬಸ್ಥರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತಿರುವ ಪೊಲೀಸರು ಈ ಬಗ್ಗೆ ಕುಟುಂಬಸ್ಥರಿಗೆ ತಿಳಿದಿತ್ತಾ ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...