alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೊಳಗಾಗಿದ್ದ 3 ವರ್ಷದ ಮಗುವಿನ ಸ್ಥಿತಿ ಗಂಭೀರ

ಚಿಕ್ಕಪ್ಪನಿಂದ್ಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ 3 ವರ್ಷದ ಬಾಲಕಿ ಲಖ್ನೋನ ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಅಂತಾ ವೈದ್ಯರು ತಿಳಿಸಿದ್ದಾರೆ.

ಮಗುವಿನ ತಂದೆ ಕಾರ್ಮಿಕ, ಮೂವರು ಮಕ್ಕಳು ಮತ್ತು ಪತ್ನಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದಾನೆ. ಶುಕ್ರವಾರ ಮಧ್ಯಾಹ್ನ ಮನೆಯ ಎದುರು ಆಟವಾಡುತ್ತಿದ್ದ ಮಗುವಿಗೆ ತಿನಿಸುಗಳ ಆಸೆ ತೋರಿಸಿ ಚಿಕ್ಕಪ್ಪ ಎತ್ತಿಕೊಂಡು ಹೋಗಿದ್ದ.

ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಬಳಿ ಕೊಂಡೊಯ್ದು ಮಗುವಿನ ಮೇಲೆ ದೌರ್ಜನ್ಯ ನಡೆಸಿದ್ದಾನೆ. ಇತ್ತ ಹೆತ್ತವರು ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ರು. ಆ ಕಟ್ಟಡದ ಬಳಿಯಿಂದ ನಡೆದುಕೊಂಡು ಬರ್ತಾ ಇದ್ದ ಮಗುವಿನ ತಂದೆಯ ತಮ್ಮನನ್ನು ಸ್ಥಳೀಯರು ಹಿಡಿದಿದ್ದಾರೆ.

ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಗುವಿನ ಮೇಲೆರಗಿದ ಪಾಪಿ ಯುವಕ 20 ವರ್ಷದ ಆಸುಪಾಸಿನವನು. ಅಡುಗೆ ಕೆಲಸ ಮಾಡಿಕೊಂಡಿದ್ದ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...