alex Certify
ಕನ್ನಡ ದುನಿಯಾ       Mobile App
       

Kannada Duniya

ರವಿಶಂಕರ್ ಗುರೂಜಿಗೆ ಸಿಗುತ್ತಾ ನೊಬೆಲ್ ಪುರಸ್ಕಾರ ?

sri_sri_ravi_shankar_official_picture

ವಿಶ್ವದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ನೊಬೆಲ್ ಪ್ರಶಸ್ತಿಗೆ ಭಾರತೀಯ, ಕನ್ನಡಿಗರೊಬ್ಬರ ಹೆಸರು ನಾಮ ನಿರ್ದೇಶನಗೊಂಡಿದೆ. ನೊಬೆಲ್ ಶಾಂತಿ ಪ್ರಶಸ್ತಿಗೆ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಅವರ ಹೆಸರು ನಾಮ ನಿರ್ದೇಶನಗೊಂಡಿದೆ ಎಂದು ಹೇಳಲಾಗಿದೆ.

ರವಿಶಂಕರ್ ಗುರೂಜಿ ಅವರು ಭಯೋತ್ಪಾದನೆಯಿಂದ ನಲುಗಿದ ದೇಶಗಳೂ ಸೇರಿದಂತೆ ಸುಮಾರು 150ಕ್ಕೂ ಹೆಚ್ಚು ದೇಶಗಳಲ್ಲಿ ಶಾಂತಿಯ ಮಂತ್ರ ಬೋಧಿಸಿದ್ದಾರೆ. ವಿಶ್ವದ ಹಲವಾರು ದೇಶಗಳಲ್ಲಿ ಆರ್ಟ್ ಆಫ್ ಲಿವಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ರವಿಶಂಕರ್ ಗುರೂಜಿ ಅವರನ್ನು ಕ್ಷೇತ್ರವಾರು ಸಾಧನೆಗೆ ಕೊಡಮಾಡುವ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಆಯ್ಕೆ ಮಾಡಲು ನಾಮ ನಿರ್ದೇಶನ ಮಾಡಲಾಗಿದೆ. ಈ ಬಾರಿ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಹಲವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಅವರಲ್ಲಿ ರವಿಶಂಕರ್ ಗುರೂಜಿ ಒಬ್ಬರಾಗಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಈಗಾಗಲೇ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಅವರ ಆರ್ಟ್ ಆಫ್ ಲಿವಿಂಗ್ ಫೌಂಡೇಷನ್ ವಿವಿಧ ರಾಷ್ಟ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಪಾರ ಸಂಖ್ಯೆಯ ಜನ ಸದಸ್ಯರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...