alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ನಡುರಸ್ತೆಯಲ್ಲಿ ಹತ್ಯೆಯಾಗ್ತಿದ್ದರೂ ನಿಂತು ನೋಡ್ತಿದ್ರು ಜನ

ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹಾಡಹಗಲೇ ನಡುರಸ್ತೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಥಳಿಸುತ್ತಿದ್ದರೂ ಸಾರ್ವಜನಿಕರು ಮೂಕಪ್ರೇಕ್ಷಕರಂತೆ ಇದನ್ನು ವೀಕ್ಷಿಸಿದ್ದಾರೆ.

ಈ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಸಮದ್ ಖಾನ್ ಎಂಬ 70 ವರ್ಷದ ನಿವೃತ್ತ ಸಬ್ ಇನ್ಸ್ಪೆಕ್ಟರ್ ಹೋಗುತ್ತಿದ್ದ ವೇಳೆ ಅವರಿಗೆ ಅಡ್ಡಹಾಕಿದ ವ್ಯಕ್ತಿಯೊಬ್ಬ ಥಳಿಸಲಾರಂಭಿಸಿದ್ದಾನೆ.

ಬಳಿಕ ಮತ್ತಿಬ್ಬರು ಸೇರಿಕೊಂಡಿದ್ದು, ಸಮದ್ ಖಾನ್ ಬಿಟ್ಟುಬಿಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ದಯ ತೋರದ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕರ ಸಮ್ಮುಖದಲ್ಲೇ ಈ ಕೃತ್ಯ ನಡೆದರೂ ಯಾರೊಬ್ಬರೂ ಸಮದ್ ಖಾನ್ ನೆರವಿಗೆ ಧಾವಿಸಿಲ್ಲ.

ತೀವ್ರವಾಗಿ ಗಾಯಗೊಂಡಿದ್ದ ಸಮದ್ ಖಾನ್ ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...