alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಯ್ತು ಶಬರಿಮಲೈ ಫೋಟೋ ಹಿಂದಿನ ಸತ್ಯ

sabarimala-womanಶಬರಿಮಲೈ ಸ್ವಾಮಿ ಅಯ್ಯಪ್ಪ ಕ್ಷೇತ್ರದಲ್ಲಿ 10 ರಿಂದ 50 ವರ್ಷದ ಮಹಿಳೆಯರಿಗೆ ಪ್ರವೇಶ ನಿಷೇಧಿಸಲಾಗಿದೆ. ಇಲ್ಲಿಗೆ ಮಹಿಳೆಯರಿಗೂ ಪ್ರವೇಶ ನೀಡಬೇಕೆಂಬ ಕೂಗು ಕೇಳಿ ಬರುತ್ತಿದ್ದು, ಈ ವಿಚಾರವೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋ ಒಂದು ಮತ್ತೆ ಈ ಕುರಿತ ಚರ್ಚೆ ಮುನ್ನೆಲೆಗೆ ಬರುವಂತೆ ಮಾಡಿದೆ.

ಕೇರಳದ ಕೊಲ್ಲಂ ಮೂಲದ ಪ್ರತಿಷ್ಟಿತ ಉದ್ಯಮಿಯೊಬ್ಬರು, ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಹೋದ ವೇಳೆ ಮಹಿಳೆಯರನ್ನೂ ಕರೆದುಕೊಂಡು ಹೋಗಿದ್ದು, ಉದ್ಯಮಿಯ ಪ್ರಭಾವಕ್ಕೊಳಗಾದ ದೇವಾಲಯದ ಆಡಳಿತ ಮಂಡಳಿ ಇದಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಕುರಿತು ತನಿಖೆ ನಡೆಸಲು ಆದೇಶಿಸಿದ್ದು, ಇದೀಗ ಸತ್ಯಾಂಶ ಬಹಿರಂಗವಾಗಿದೆ. ಉದ್ಯಮಿ ಜೊತೆ ದೇವಾಲಯಕ್ಕೆ ತೆರಳಿದ್ದ ಮಹಿಳೆಯರು 50 ವರ್ಷ ದಾಟಿದವರೆಂದು ಹೇಳಲಾಗಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನಕ್ಕೂ ಮುನ್ನ ತಮ್ಮ ವಯಸ್ಸಿನ ದೃಢೀಕರಣ ಪತ್ರ ನೀಡಿದ ಬಳಿಕವೇ ಅವರಿಗೆ ದೇವಾಲಯ ಪ್ರವೇಶಿಸಲು ಅನುಮತಿ ನೀಡಲಾಗಿತ್ತು ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...