alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲ್ನಡಿಗೆಯಲ್ಲಿಯೇ ಕೇದಾರನಾಥಕ್ಕೆ ಭೇಟಿ ನೀಡಿದ ಮುಕೇಶ್ ಅಂಬಾನಿ

ರಿಲಯನ್ಸ್ ಇಂಡಸ್ಟ್ರಿ ಅಧ್ಯಕ್ಷ ಮುಕೇಶ್ ಅಂಬಾನಿ ಸೋಮವಾರ ಕೇದಾರನಾಥ ಹಾಗೂ ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕೇದಾರನಾಥ ಹಾಗೂ ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿದ ಮುಕೇಶ್ ಅಂಬಾನಿ, ಇಶಾ ಅಂಬಾನಿ ಮದುವೆ ಮಂಗಳ ಪತ್ರವನ್ನು ದೇವರಿಗೆ ಅರ್ಪಿಸಿದ್ದಾರೆ.

ಬದರಿನಾಥದವರೆಗೆ ಹೆಲಿಕಾಪ್ಟರ್ ನಲ್ಲಿ ಬಂದ ಮುಕೇಶ್ ಅಂಬಾನಿ ನಂತ್ರ ಸುಮಾರು ಒಂದು ಕಿಲೋಮೀಟರ್ ವರೆಗೆ ಕಾಲ್ನಡಿಗೆಯಲ್ಲಿ ಬಂದು ದೇವಸ್ಥಾನ ತಲುಪಿದ್ರು. ಹಿಮಪಾತವಾದ ಕಾರಣ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಮುಕೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಮದುವೆ ಡಿಸೆಂಬರ್ 12 ರಂದು ನಡೆಯಲಿದೆ.

ಮುಕೇಶ್ ಅಂಬಾನಿ ಜೊತೆ ರಿಲಯನ್ಸ್ ಇಂಡಸ್ಟ್ರಿಯ ಕೆಲ ಅಧಿಕಾರಿಗಳಿದ್ದರು. ಕೇದಾರನಾಥ ದೇವಸ್ಥಾನದಲ್ಲಿ ಸುಮಾರು ಒಂದು ಗಂಟೆಗಳನ್ನು ಕಳೆದ ಮುಕೇಶ್ ಅಂಬಾನಿ, ದೇವರ ಮುಂದೆ ಮಗಳ ಮದುವೆ ಮಂಗಳ ಪತ್ರವನ್ನಿಟ್ಟರು. ದೇವಸ್ಥಾನಕ್ಕೆ 51 ಲಕ್ಷ ರೂಪಾಯಿ ದಾನ ನೀಡಿದ್ದಾರೆಂದು ಮೂಲಗಳು ಹೇಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...