alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀನಗರದಲ್ಲಿ ಗುಂಡಿಕ್ಕಿ ಹಿರಿಯ ಪತ್ರಕರ್ತನ ಹತ್ಯೆ

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಇಂದು ಪತ್ರಕರ್ತರೊಬ್ಬರನ್ನು ಹತ್ಯೆ ಮಾಡಲಾಗಿದೆ. ಶ್ರೀನಗರದಲ್ಲಿ ಈ ಹತ್ಯೆ ನಡೆದಿದ್ದು, ಕಛೇರಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ‘ರೈಸಿಂಗ್ ಕಾಶ್ಮೀರ್’ ಪತ್ರಿಕೆ ಸಂಪಾದಕ ಸುಜ್ಜತ್ ಬುಕಾರಿ ಹಾಗೂ ಅವರ ಅಂಗರಕ್ಷಕರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಇಫ್ತಾರ್ ಕೂಟದಲ್ಲಿ ಪಾಲ್ಗೊಳ್ಳಲೆಂದು ಸುಜ್ಜತ್ ಬುಕಾರಿ ತಮ್ಮ ಅಂಗರಕ್ಷಕನೊಂದಿಗೆ ಕಛೇರಿಯಿಂದ ಹೊರ ಬರುವ ವೇಳೆ ನಾಲ್ವರು ಭಯೋತ್ಪಾದಕರ ತಂಡ ಅವರುಗಳ ಮೇಲೆ ಗುಂಡಿನ ದಾಳಿ ನಡೆಸಿದೆ.

ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಅವರುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹಂತಕರ ಶೋಧಕ್ಕಾಗಿ ಜಮ್ಮು ಕಾಶ್ಮೀರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...