alex Certify
ಕನ್ನಡ ದುನಿಯಾ       Mobile App
       

Kannada Duniya

ಝೇಲಂ ನದಿಗೆ ಹಾರಿ ಪರಾರಿಯಾದ ಉಗ್ರರು

jhelum

ಶ್ರೀನಗರ : ಬಾರಾಮುಲ್ಲಾದ ಸೇನಾ ಕ್ಯಾಂಪ್ ಮೇಲೆ, ವಿಧ್ವಂಸಕ ಕೃತ್ಯ ಎಸಗುವ ಯತ್ನ ವಿಫಲವಾದ ನಂತರ, ಉಗ್ರರು ಪರಾರಿಯಾಗಿದ್ದಾರೆ.

ಸೈನಿಕರ ಪ್ರತಿದಾಳಿಯಿಂದ ಕಂಗೆಟ್ಟ ಉಗ್ರರು, ಸೇನಾ ಶಿಬಿರದ ಸಮೀಪದ ಝೇಲಂ ನದಿಯಲ್ಲಿ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ. ರಾತ್ರಿ ಸೇನಾ ಕ್ಯಾಂಪ್ ಮೇಲೆ ಗ್ರೆನೇಡ್ ಎಸೆದು, ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಮುಂದಾಗಿದ್ದು, ಇದನ್ನು ತಡೆಯುವಲ್ಲಿ ಸೇನೆ ಯಶಸ್ವಿಯಾಗಿದೆ. ಉಗ್ರರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಉಳಿದವರು ಜೀವ ಉಳಿಸಿಕೊಳ್ಳುವ ಯತ್ನದಲ್ಲಿ ನದಿಗೆ ಹಾರಿ ಪರಾರಿಯಾಗಿದ್ದಾರೆ. ಈ ನಡುವೆ ಕೆಲವು ಮನೆಗಳಲ್ಲಿ ಉಗ್ರರು ಅಡಗಿ, ಗುಂಡಿನ ದಾಳಿ ನಡೆಸುತ್ತಿದ್ದಾರೆ. ಸೇನೆ ಉಗ್ರರನ್ನು ಸದೆ ಬಡಿಯಲು ಕಾರ್ಯಾಚರಣೆ ಮುಂದುವರೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...