alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಲಲಿತಾ ಕ್ಷೇತ್ರದಲ್ಲಿ ಬಿಗಿಭದ್ರತೆಯಲ್ಲಿ ಮತದಾನ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪ್ರತಿನಿಧಿಸುತ್ತಿದ್ದ ಚೆನ್ನೈ ಆರ್.ಕೆ. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಆರಂಭವಾಗಿದ್ದು, ಬಿರುಸಿನಿಂದ ಸಾಗಿದೆ.

ಎ.ಐ.ಎ.ಡಿ.ಎಂ.ಕೆ. ಅಭ್ಯರ್ಥಿ ಮಧುಸೂದನನ್, ಡಿ,ಎಂ.ಕೆ. ಅಭ್ಯರ್ಥಿಯಾಗಿ ಗಣೇಶನ್, ಪಕ್ಷೇತರ ಅಭ್ಯರ್ಥಿಯಾಗಿ ಶಶಿಕಲಾ ನಟರಾಜನ್ ಸಂಬಂಧಿ ಟಿ.ಟಿ.ವಿ. ದಿನಕರನ್ ಸೇರಿದಂತೆ 59 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

256 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2,28,234 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಮತದಾನದ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 4 ಅರೆಸೇನಾ ಪಡೆ ತುಕಡಿ, 3000 ಕ್ಕೂ ಅಧಿಕ ಪೊಲೀಸರು ಬಂದೋಬಸ್ತ್ ನಲ್ಲಿದ್ದಾರೆ.

ಜಯಲಲಿತಾ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರಕ್ಕೆ ಹಿಂದೆಯೇ ಉಪ ಚುನಾವಣೆ ನಿಗದಿಯಾಗಿತ್ತಾದರೂ, ಭಾರೀ ಪ್ರಮಾಣದಲ್ಲಿ ಹಣ ಹಂಚಿಕೆ ಮಾಡಲಾಗಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ಮುಂದೂಡಲಾಗಿತ್ತು. ಮತ್ತೆ ಉಪ ಚುನಾವಣೆ ನಡೆಯುತ್ತಿದ್ದು, ಜಯಲಲಿತಾ ನಿಧನದ ಬಳಿಕ ಆಡಳಿತಾರೂಢ ಎ.ಐ.ಎ.ಡಿ.ಎಂ.ಕೆ.ಗೆ ಅಗ್ನಿ ಪರೀಕ್ಷೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...