alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಶೆಲ್ಟರ್ ಗೆ ಕಾರ್ ಡಿಕ್ಕಿ: ಐವರ ಸಾವು

ಬಸ್ ಶೆಲ್ಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣದ ನಲ್ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ನಲ್ಗೊಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ನಸರ್ಲಪಲ್ಲಿ ಬಳಿ ಈ ಭೀಕರ ದುರ್ಘಟನೆ ನಡೆದಿದ್ದು, ಕಾರು ಚಾಲಕ ನಿದ್ರೆಯ ಮಂಪರಿನಲ್ಲಿದ್ದುದೆ ಘಟನೆಗೆ ಕಾರಣವೆನ್ನಲಾಗಿದೆ.

ಮತ್ತೊಂದು ವಾಹನಕ್ಕೆ ಕಾರು ಡಿಕ್ಕಿ ಹೊಡೆಯುತ್ತದೆ ಎಂಬ ಕಾರಣಕ್ಕೆ ಚಾಲಕ ಏಕಾಏಕಿ ಸ್ಟೇರಿಂಗ್ ತಿರುಗಿಸಿದ್ದು, ಆಗ ಬಸ್ ಶೆಲ್ಟರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಐವರು ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು, ಅಪಘಾತದ ಕುರಿತು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...