alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ನಿಯಮ ಉಲ್ಲಂಘಿಸಿದರೆ ಭಾರೀ ದಂಡ

road mn 21

ದೇಶದಲ್ಲಿ ಹೆಚ್ಚುತ್ತಿರುವ ಅಪಘಾತ, ರಸ್ತೆ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಂಡದ ಮೊತ್ತವನ್ನು ಹೆಚ್ಚಿಸಲು ವಿವಿಧ ರಾಜ್ಯಗಳ ಸಾರಿಗೆ ಸಚಿವರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ, ರಚಿಸಿರುವ ವಿವಿಧ ರಾಜ್ಯಗಳ ಸಾರಿಗೆ ಸಚಿವರ ಸಭೆಯಲ್ಲಿ, 1988 ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ಶುಲ್ಕ ಹಾಗೂ ದಂಡದ ಮೊತ್ತವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ದೇಶದಲ್ಲಿ ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿವಿಧ ರಾಜ್ಯಗಳ ಸಾರಿಗೆ ಸಚಿವರ ಸಮಿತಿ ಅಧ್ಯಕ್ಷರಾದ ರಾಜಸ್ತಾನದ ಸಾರಿಗೆ ಸಚಿವ ಯೂನಸ್ ಖಾನ್ ತಿಳಿಸಿದ್ದಾರೆ.

ರಸ್ತೆ ನಿಯಮಗಳನ್ನು ಉಲ್ಲಂಘಿಸಿದವರಿಗೆ, ಈಗಿನ ಕಾಯ್ದೆಯ ಪ್ರಕಾರ 200 ರೂ.ಗಳಿಂದ 2000 ರೂ.ಗಳವರೆಗೆ ದಂಡ ವಿಧಿಸಬಹುದಾಗಿದೆ. ಈ ದಂಡದ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇನ್ನೂ ಹಲವಾರು ಸಲಹೆ, ಸೂಚನೆಗಳ ಬಗ್ಗೆ ಚರ್ಚಿಸಿದ್ದು, ಎಲ್ಲವನ್ನು ಒಳಗೊಂಡ ಶಿಫಾರಸುಗಳ ವರದಿಯನ್ನು ಕೇಂದ್ರಕ್ಕೆ ನೀಡಲಾಗುವುದು ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...