alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡಿಟ್ಟು RSS ನಾಯಕನ ಹತ್ಯೆ

ಲೂಧಿಯಾನಾ: ಪಂಜಾಬ್ ನ ಲೂಧಿಯಾನಾದಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಆರ್.ಎಸ್.ಎಸ್. ನಾಯಕರೊಬ್ಬರು ಬಲಿಯಾಗಿದ್ದಾರೆ.

ಆರ್.ಎಸ್.ಎಸ್. ಹಿರಿಯ ಮುಖಂಡ ರವೀಂದ್ರ ಗೋಸಾಯ್(58) ಹತ್ಯೆಗೀಡಾದವರು. ಲೂಧಿಯಾನಾದ ತಮ್ಮ ಮನೆಯ ಸಮೀಪ ರವೀಂದ್ರ ನಾಯಿಯೊಂದಿಗೆ ವಾಕಿಂಗ್ ಹೋಗುವಾಗ, ಬೈಕ್ ನಲ್ಲಿ ಬಂದಿದ್ದ ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಕುತ್ತಿಗೆಗೆ ಗುಂಡೇಟು ಬಿದ್ದಿದ್ದು, ರವೀಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಲೂಧಿಯಾನಾದ ರಘುನಾಥ್ ನಗರದ ಆರ್.ಎಸ್.ಎಸ್. ಮೋಹನ್ ಶಾಖಾ ಮುಖ್ಯಸ್ಥರಾಗಿದ್ದ ಅವರು, ಬಿ.ಜೆ.ಪಿ. ಪದಾಧಿಕಾರಿಯಾಗಿಯೂ ಕೆಲಸ ಮಾಡಿದ್ದರು. 2016 ರಲ್ಲಿ ಇದೇ ರೀತಿ ಆರ್.ಎಸ್.ಎಸ್. ನಾಯಕರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...