alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ?

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಪಿಎಂ ಮುಖಂಡ ಸೀತಾರಾಮ್ ಯಚೂರಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ದೆಹಲಿಯಲ್ಲಿ ನಡೆಯಲಿರುವ “ಭವಿಷ್ಯದ ಭಾರತ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದೃಷ್ಟಿಕೋನ’’ ಕಾರ್ಯಕ್ರಮಕ್ಕೆ ರಾಹುಲ್ ಆಹ್ವಾನಿಸುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ, ಆರ್ ಎಸ್ ಎಸ್ ಮುಖಂಡರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಆರ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜನರ ಜೊತೆ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮ ಸೆಪ್ಟೆಂಬರ್ 17 ರಿಂದ 19 ರವರೆಗೆ ನಡೆಯಲಿದೆ. ದೇಶದ ದೊಡ್ಡ ಗುಂಪು ಆರ್ ಎಸ್ ಎಸ್ ಜೊತೆ ಸೇರಲು ಬಯಸ್ತಿದೆ. ಸಂಘದ ದೃಷ್ಟಿಕೋನ ಏನು ಎಂಬುದನ್ನು ತಿಳಿಯಲು ಬಯಸುತ್ತಿದೆ ಎಂದು ನಾಯಕ ಅರುಣ್ ಕುಮಾರ್ ಹೇಳಿದ್ದಾರೆ.

ಆರ್ ಎಸ್ ಎಸ್ ತನ್ನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲ ವರ್ಗದ ಜನರನ್ನು ಕರೆಯಲಿದೆಯಂತೆ. ರಾಜಕೀಯ ಪಕ್ಷಗಳ ನಾಯಕರೂ ಇದ್ರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿಂದೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರದಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದು ಅನೇಕ ಕಾಂಗ್ರೆಸ್ ನಾಯಕರ ಮುನಿಸಿಗೆ ಕಾರಣವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...